ಮಂಗಳೂರು, ಜು 19 (DaijiworldNews/MS): ಕೊರೊನಾ ಭೀತಿಯನ್ನು ಮೆಟ್ಟಿ ನಿಂತು ಎಸೆಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಅವಿಭಜಿತ ಜಿಲ್ಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆ ನಡೆಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ಮಂಗಳೂರು
ಉಡುಪಿ
ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,657 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 77 ಪರೀಕ್ಷಾ ಕೇಂದ್ರಗಳಲ್ಲಿ 12,881 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.ಕೋರ್ ವಿಷಯದಲ್ಲಿ ಸೋಮವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.
ಆರೋಗ್ಯ ತಪಾಸಣೆಯ ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತದೆ. ಸಾಮಾಜಿಕ ಅಂತರವನ್ನು ಕಾಪಾಡುವುದು, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಜರ್ಗಳ ಬಳಕೆಯನ್ನು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತದೆ.
ಸೋಂಕಿತ ವಿದ್ಯಾರ್ಥಿಗಳು:
ದ.ಕ ಜಿಲ್ಲೆಯಲ್ಲಿ 9 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಕೊವೀಡ್ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.