ಮಂಗಳೂರು, ಜು.19 (DaijiworldNews/HR): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ನಕಲಿ ಆಡಿಯೋ ಎಂದು ಆರೋಪಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ.
ಕಮಿಷನರ್ ಗೆ ದೂರು ನೀಡಿದ ಸಂಧರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಭಾಗಿಯಾಗಿದ್ದರು.
ಕಮಿಷನರ್ ಕಚೇರಿಗೆ ಜಿಲ್ಲೆಯ ಐದು ಶಾಸಕರು ಆಗಮಿಸಿ ವೈರಲ್ ಆದ ಆಡಿಯೋ ನಕಲಿ ಎಂದು ಆರೋಪಿಸಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ದೂರು ನೀಡಿದ್ದಾರೆ.