ಕಾಸರಗೋಡು, ಜು.20 (DaijiworldNews/HR): ಕೇರಳ ಕರ್ನಾಟಕ ಗಡಿಯ ತಲಪಾಡಿಯಲ್ಲಿ ನೂತನವಾಗಿ ನಿರ್ಮಿಸುವ ಸಂಯೋಜಿತ ಚೆಕ್ ಪೋಸ್ಟ್ ಕಟ್ಟಡಕ್ಕೆ ರಾಜ್ಯ ಅರಣ್ಯ ಸಚಿವ ಎ.ಕೆ ಶಶೀಂದ್ರನ್ ಆನ್ಲೈನ್ ಮೂಲಕ ಚಾಲನೆ ನೀಡಿದರು.
ಸುಮಾರು10. 27 ಕೋಟಿ ರೂ. ವೆಚ್ಚದಲ್ಲಿ ಸಂಯೋಜಿತ ಫಾರೆಸ್ಟ್ ಚೆಕ್ ಪೋಸ್ಟ್ ಸಮುಚ್ಚಯ 11.27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮುಂದಿನ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದ್ದು, ಕಾಸರಗೋಡು ವಿಭಾಗೀಯ ಅರಣ್ಯಾಧಿಕಾರಿ ಅಜಿತ್ ಕೆ.ರಾಮನ್, ಕಾಸರಗೋಡು ವಲಯಾಧಿಕಾರಿ ಸೋಳಮನ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.