ತಿರುವನಂತಪುರಂ, ಅ 15 (MSP): ಕ್ರೈಸ್ತ ಸನ್ಯಾಸಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪಾದ್ರಿ ಫ್ರಾಂಕೊ ಮುಲಕ್ಕಲ್ ಅವರಿಗೆ ಕೇರಳ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಅತ್ಯಾಚಾರಿ ಪಾದ್ರಿಯು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು. ಈ ಹಿನ್ನಲೆಯಲ್ಲಿ ಮೂರು ವಾರಗಳ ಹಿಂದೆ ಬಿಷಪ್ ಫ್ರಾಂಕೋ ಅವರನ್ನು ಬಂಧಿಸಲಾಗಿತ್ತು. ಜಿಲ್ಲಾ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಜಾಮೀನಿಗಾಗಿ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪಾದ್ರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಷಪ್ ಮುಲಕ್ಕಲ್ ಪ್ರಾಂಕೋ ಕೇರಳಕ್ಕೆ ಪ್ರವೇಶಿಸಲು ಅನುಮತಿ ನಿರಾಕರಿಸಿ ಮತ್ತು ಅವರ ಪಾಸ್ಪೋರ್ಟ್ನ್ನು ಕೋರ್ಟ್ ಗೆ ಸಲ್ಲಿಸುವಂತೆ ತಿಳಿಸಿ ಷರತ್ತುಬದ್ದ ಜಾಮೀನು ನೀಡಿದೆ.ಇದಲ್ಲದೆ ಪೊಲೀಸರು ಅಂತಿಮ ವರದಿ ಸಲ್ಲಿಸುವವರೆಗೆ ಎರಡು ವಾರಗಳಿಗೊಮ್ಮೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಷರತ್ತು ವಿಧಿಸಿದೆ.
2014 ರಲ್ಲಿ ತನ್ನ ಗೆಸ್ಟ್ ಹೌಸ್ ಗೆ ಕ್ರೈಸ್ತ ಸನ್ಯಾಸಿನಿಯನ್ನು ಕರೆಸಿಕೊಂಡಿದ್ದ ಬಿಷಪ್, ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದು, ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಆರೋಪಿ ಜೂನ್ ನಲ್ಲಿ ಕ್ರೈಸ್ತ ಸನ್ಯಾಸಿನಿ ದೂರು ಸಲ್ಲಿಸಿದ್ದರು. ಭಾರತದಲ್ಲಿ ಅತ್ಯಾಚಾರ ಆರೋಪದ ಮೇಲೆ ಬಂಧಿತರಾದ ಮೊದಲ ಕ್ಯಾಥೊಲಿಕ್ ಬಿಷಪ್ ಎಂಬ ಕುಖ್ಯಾತಿಗೆ ಫ್ರಾಂಕೊ ಮೇಲಿದೆ.