ಉಳ್ಳಾಲ, ಜು 22(DaijiworldNews/MS): ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ದೀಪಕ್ ಶೆಟ್ಟಿ(32) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಜುಲೈ 21ರಂದು ಸಂಜೆ ಬೆಳಕಿಗೆ ಬಂದಿದೆ.
ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ದೀಪಕ್ ಶೆಟ್ಟಿ ಕಳೆದ ಒಂದೂವರೆ ತಿಂಗಳಿಂದ ಕೆಲಸಕ್ಕೆ ಹೋಗಿರಲಿಲ್ಲ. ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಈತನ ತಾಯಿ ಕೆಲಸಕ್ಕೆ ತೆರಳಿದ್ದು, ಸಂಜೆ ಮನೆಯ ಪಕ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತನ ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ದೀಪಕ್ ಸ್ಥಳೀಯ ಕೊರಗಜ್ಜ ಸೇವಾ ಸಮಿತಿ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.