ಮಂಗಳೂರು, ಜು 22 (DaijiworldNews/MS): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಯೋಗಭ್ಯಾಸದ ಸಂದರ್ಭ ಬಿದ್ದು ತಲೆಗೆ ಏಟಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಗರದಲ್ಲಿ ಜು. 23 ರ ಶುಕ್ರವಾರ ನಡೆಯಬೇಕಾಗಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.
ಮಾತ್ರವಲ್ಲದೆ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.