ಮಂಗಳೂರು, ಜು. 22 (DaijiworldNews/SM): ಬಿಜೆಪಿ ಸರಕಾರ ರಾಜ್ಯದ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರದಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಅನಾರೋಗ್ಯದಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ಕೊರೋನಾ ನಿರ್ವಹಣೆಗೂ ಸರಕಾರ ವಿಫಲವಾಗಿದೆ. ರಾಜ್ಯದಲ್ಲಿ ಲಕ್ಷಾಂತರ ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇದೀಗ ಬಿಜೆಪಿ ಸರಕಾರವನ್ನು ಜನತೆ ದ್ವೇಷಿಸುವ ಹಂತಕ್ಕೆ ಬಂದಿದ್ದಾರೆ ಎಂದರು.
ಇನ್ನು ಸದ್ಯ ನಾಯಕತ್ವ ಬದಲಾವಣೆ ಬಗ್ಗೆ ಎದ್ದಿರುವ ಚರ್ಚೆಯ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ನಾಯಕತ್ವ ಬದಲಾವಣೆ ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದರು.