ಮಂಗಳೂರು, ಜು. 22 (DaijiworldNews/SM): ಅನಾರೋಗ್ಯದಲ್ಲಿರುವ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು.
ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿದರು. ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಆಸ್ಕರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದಾರೆ. ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಅವರು ಅನಾರೋಗ್ಯದಲ್ಲಿದ್ದು, ಐಸಿಯುವಿನಲ್ಲಿರುವ ಹಿನ್ನೆಲೆ ಸ್ವಲ್ಪ ಆತಂಕವಿದೆ. ವೈದ್ಯರು ತಮ್ಮ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆಸ್ಪತ್ರೆಗಳು ಉತ್ತಮವಾಗಿ ಸೇವೆ ನೀಡುತ್ತಿವೆ. ಅವರು ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.