ಮಂಗಳೂರು, ಜು. 22 (DaijiworldNews/SM): ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದ ವಿಚಾರವಾಗಿ ವದಂತಿಗಳನ್ನು ಹರಡಿಸಲಾಗುತ್ತಿದೆ. ಸುಳ್ಳು ಸುದ್ದಿ ಹರಡಿಸದಿರಿ ಎಂದು ಡಿಸಿಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಯೋಗ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಕುಸಿದು ಬಿದ್ದಿದ್ದರು. ಹಾಗೂ ಮಂಗಳೂರಿನ ಯೆನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಇನ್ನು ಅವರ ಆಸ್ಕರ್ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಇನ್ನು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದ ವಿಚಾರವಾಗಿ ವದಂತಿ ಹರಡಿಸುವ ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಐಸಿಸಿ ಮೂಲಗಳು ಸ್ಪಷ್ಟಪಡಿಸಿವೆ.