ಕುಂದಾಪುರ, ಜು 24 (DaijiworldNews/MS): ಸಾಮಾಜಿಕ ಕಾರ್ಯಕರ್ತ ಯಡಮೊಗೆ ಹೊಸಬಾಳು ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಜಾಮೀನು ಅರ್ಜಿ ತಿರಸ್ಕರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣದ ಬಂಧಿತ ಐವರ ಪೈಕಿ ತನ್ನ ವಕೀಲರ ಮೂಲಕ ಸೆಶನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ಬಾಲಚಂದ್ರ ಭಟ್ ಜಾಮೀನು ಅರ್ಜಿ ವಜಾಗೊಳಿಸಿ ಕುಂದಾಪುರದ ಜಿಲ್ಲಾ ಮತ್ತುಸತ್ರ ನ್ಯಾಯಾಲಯದ ನ್ಯಾಯಾಧೀಶರಾದ
ರವೀಂದ್ರ ಎಂ. ಜೋಷಿ ಆದೇಶ ನೀಡಿದ್ದಾರೆ. ಸರ್ಕಾರದ ಪರ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ ಚಂದ್ರ ಶೆಟ್ಟಿ ವಾದಿಸಿದ್ದರು. ಕೊಲೆಗೆ ಸಂಚು ರೂಪಿಸಿದ ಆರೋಪದಡಿಯಲ್ಲಿ ಬಾಲಚಂದ್ರ ಭಟ್ ಬಂಧನವಾಗಿತ್ತು