ಬೆಂಗಳೂರು, ಅ 16 (MSP): ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಇದೇ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರವೂ ಪ್ರಮುಖವಾಗಿ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದ ಖಡಕ್ ಪೊಲೀಸ್ ಅಧಿಕಾರಿಗಳನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಖಡಕ್ ನಿರ್ಧಾರದ ಮೂಲಕ ಜನರಿಂದ ಸಿಂಗಂ ಎಂದು ಕರೆಸಿಕೊಂಡಿರುವ ಕೆ.ಅಣ್ಣಾಮಲೈ, ಹರಿಶೇಖರನ್, ಅಜಯ್ ಹಿಲೋರಿ, ರಾಹುಲ್ ಕುಮಾರ್ ಮತ್ತು ಹರೀಶ್ ಪಾಂಡೆ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಎಸ್ಪಿಯಾಗಿದ್ದ ಕೆ. ಅಣ್ಣಾಮಲೈ ಅವರನ್ನ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್ಆರ್ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್ ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ. ಉಳಿದಂತೆ ರಾಹುಲ್ ಕುಮಾರ್ ಅವರನ್ನು ಡಿಸಿಪಿ ಪೂರ್ವ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ