ಮಂಗಳೂರು, ಜು 25 (DaijiworldNews/PY): ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಇಂದು ಯೆನಪೋಯ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಐಸಿಸಿ ಕೇರಳ ಉಸ್ತುವಾರಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಡಾ.ಆನಂದ್ಕುಮಾರ್, ಸಯ್ಯದ್ ನಾಸೀರ್ ಹುಸೇನ್ ಮುಂತಾದವರು ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದರು.
ಆಸ್ಕರ್ ಅವರು ತೀವ್ರ ನಿಗಾ ಘಟಕದಲ್ಲಿರುವುದರಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಕಾರಣ, ಅವರ ಕುಟುಂಬದವರ ಜೊತೆ ಕೆಲ ಸಮಯ ಮಾತುಕತೆ ನಡೆಸಿ, ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದರು.
ಯೋಗ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಕುಸಿದು ಬಿದ್ದಿದ್ದರು. ಅವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.