ಮಂಗಳೂರು, ಜು. 25 (DaijiworldNews/SM): ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ಸಂದರ್ಭದಲ್ಲಿ ಕೈ ಜಾರಿ ಬಿದ್ದು, ಪ್ರಜ್ಞೆ ಕಳೆದುಕೊಂಡಿದ್ದರು. ಬಳಿಕ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿನ್ನೆಲೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಆಸ್ಕರ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ.