ಕಾಸರಗೋಡು, ಜು.27 (DaijiworldNews/HR): ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಕಾಸರಗೋಡು ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸೂರಂಬೈಲ್ನ ಸುಬ್ರಮಣ್ಯ (23) ಮತ್ತು ಮೊಗ್ರಾಲ್ನ ಮುಜಾಮಿಲ್(24) ಎಂದು ಗುರುತಿಸಲಾಗಿದೆ.
ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತ ಬೈಲ್ನಿಂದ ಕಾರು ಸಹಿತ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಕರ್ನಾಟಕದಿಂದ ಮದ್ಯವನ್ನು ಕಾಸರಗೋಡಿಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಕಾರಿನಲ್ಲಿ 36 ಬಾಕ್ಸ್ ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು. 1728೧ ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.