ಕಾಸರಗೋಡು, ಜು.29 (DaijiworldNews/HR): ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ತಲಪಿದೆ. ಗುರುವಾರ 929 ಮಂದಿಗೆ ಸೋಂಕು ದೃಢಪಟ್ಟಿದ್ದು, 753 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 7,001 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27, 925 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,05958 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 98,098 ಮಂದಿ ಗುಣಮುಖರಾಗಿದ್ದು, ಒಟ್ಟು 335 ಮಂದಿ ಮೃತಪಟ್ಟಿದ್ದಾರೆ.