ಮಂಗಳೂರು, ಜು 30 (DaijiworldNews/PY): ನಗರದ ಹೊರವಲಯದ ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ನವಿಲು ಸತ್ತು ಬಿದ್ದಿರುವುದು ಪತ್ತೆಯಾಗಿದೆ.
ಕೋಟೆಕಾರು ಸ್ಟೆಲ್ಲಾ ಮೇರಿಸ್ ಶಾಲೆಯ ಹಿಂಭಾಗದಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೈಲು ಢಿಕ್ಕಿಯಾದ ಕಾರಣ ನವಿಲು ಸಾವನ್ನಪ್ಪಿರುವ ಬಗ್ಗೆ ಸಾರ್ವಜನಿಕರಲ್ಲಿ ಶಂಕೆ ವ್ಯಕ್ತವಾಗಿದೆ.
ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಸ್ಥಳಕ್ಕೆ ಆಗಮಿಸಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.