ಮಂಗಳೂರು ಜು 31(DaijiworldNews/MS): ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಅರೋಗ್ಯ ಪರಿಸ್ಥಿತಿಯನ್ನು ಚೇತರಿಕೆ ಕಂಡುಬಂದಿದೆ.
ನಗರದ ಕೊಡಿಯಾಲ್ ಬೈಲ್ ನ ಯೇನಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಕಳೆದ ಸೋಮವಾರ ತಡರಾತ್ರಿ 12ರಿಂದ ಮಂಗಳವಾರ ನಸುಕಿನ ವೇಳೆವರೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದು ಮೆದುಳಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿತ್ತು. ಇದಾದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.