ಕಾಸರಗೋಡು, ಜು.31 (DaijiworkldNews/HR): ಜಿಲ್ಲೆಯಲ್ಲಿ ಶನಿವಾರ 715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 803 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,927 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28, 400 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1,07,354 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 99, 561 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವಿಟಿ ರೇಟ್ 10.7 ಕ್ಕೆ ತಲಪಿದೆ.
ಕೇರಳದಲ್ಲಿ 20,624 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.