ಉಡುಪಿ, ಆ.01 (DaijiworldNews/HR): ಮಲ್ಪೆ ಕಡಲತೀರದಲ್ಲಿ ಯುವತಿಯೋರ್ವಳು ನೀರುಪಾಲಾದ ಘಟನೆ ಭಾನುವಾರ ಸಂಭವಿಸಿದೆ.
ಮುಂಜಾನೆ ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ಮಲ್ಪೆ ಬೀಚ್ ಗೆ ಆಗಮಿಸಿನೀರಿನಲ್ಲಿ ಆಟವಾಡುತ್ತಿದ್ದರು. ಸ್ಥಳೀಯರು ನೀರಿಗೆ ಹೋಗದಂತೆ ಎಚ್ಚರಿಕೆ ನೀಡಿದ್ದರೂ ಇವರು ಕೇಳದೆ ಹೋದ ಪರಿಣಾಮ ಈ ದುರಂತ ಸಂಭವಿಸಿದೆ.
ಇನ್ನು ನಾಲ್ಕು ಮಂದಿಯ ಪೈಕಿ ಒರ್ವ ಯುವತಿ ನಾಪತ್ತೆಯಾಗಿದ್ದು, ಉಳಿದವರನ್ನು ಸ್ಥಳೀಯರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಿಸಿದವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.