ಉಡುಪಿ ಅ19(SS): ಜಿಲ್ಲೆಯಲ್ಲಿ ಹಲವಾರು ತಿಂಗಳಿನಿಂದ ಸೃಷ್ಟಿಯಾಗಿರುವ ಮರಳು ಸಮಸ್ಯೆಯನ್ನು ಶೀಘ್ರ ಪರಿಹರಿಸದಿದ್ದರೆ ಜಿಲ್ಲಾಡಳಿತದ ವಿರುದ್ಧ ಧರಣಿ ನಡೆಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಮರಳು ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದರೂ, ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುತ್ತಿದೆ. ಜಿಲ್ಲೆಯಲ್ಲಿನ ಮರಳು ಸಮಸ್ಯೆ ಪರಿಹಾರವಾಗಬೇಕು. ಇದೇ ತಿಂಗಳ 25ರ ಒಳಗೆ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತದ ಕ್ರಮದಿಂದಾಗಿ ಕಾರ್ಮಿಕರು, ಮರಳು ಸಾಗಾಟಗಾರರು, ಮನೆ ನಿರ್ಮಾಣ ಮಾಡುವವರು, ಕಟ್ಟಡ ಕೆಲಸಗಾರರಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಸಂಘಸಂಸ್ಥೆಗಳ ಜೊತೆ ಸೇರಿ ಪಕ್ಷಾತೀತವಾಗಿ ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.