ಪತ್ತನಂತಿಟ್ಟ, ಅ19(SS): ಸಾವಿರಾರು ವರುಷಗಳ ಇತಿಹಾಸವಿರುವ ಶಬರಿಮಲೆಯಲ್ಲಿ ಉದ್ದೇಶಪೂರ್ವಕವಾಗಿ ಘರ್ಷಣೆಯ ಪರಿಸ್ಥಿತಿಯನ್ನು ನಿರ್ಮಿಸಲಾಗಿದೆ ಎಂದು ಕೇರಳ ದೇವಸ್ವಂ ಸಚಿವ ಕಡಕ್ಕಂಪಳ್ಳಿ ಸುರೇಂದ್ರನ್ ಗಂಭೀರವಾಗಿ ಆರೋಪಿಸಿದ್ದಾರೆ.
ಆರೆಸ್ಸೆಸ್ ನಾಯಕರದ್ದೆನ್ನಲಾದ ಆಡಿಯೋ ಕ್ಲಿಪ್ ಒಂದನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು. ಈ ಗಲಭೆಯಯನ್ನು ನಡೆಸುವಂತೆ ಸ್ವತಃ ಆರೆಸ್ಸೆಸ್ ನಾಯಕರೊಬ್ಬರು ಕರೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೆಸ್ಸೆಸ್ ಕಾರ್ಯಕರ್ತರು ಭಕ್ತರ ಹಾಗೆ ಇರುಮುಡಿ ಕಟ್ಟಿಕೊಂಡು ಹೋಗಿ ಶಬರಿಮಲೆಯಲ್ಲಿ ನಂಬರ್ ಒಂದಕ್ಕೆ ಕರೆ ಮಾಡಬೇಕು. ಬಳಿಕ ಎಲ್ಲರೂ ಒಂದೆಡೆ ಸೇರಬೇಕೆಂದು ಆಡಿಯೋ ಕ್ಲಿಪ್ ನಲ್ಲಿ ಕರೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಇದೇ ವೇಳೆ ಕೇರಳದಲ್ಲಿ ನಿರಂತರ ಸುಳ್ಳುಹೇಳಿ ಗೋಬಲ್ಸ್ ನೀತಿಯನ್ನು ಕಾರ್ಯರೂಪಕ್ಕೆ ತರಲು ಬಿಜೆಪಿ ಯತ್ನಿಸುತ್ತಿದೆ. ಪತ್ರಕರ್ತರ ವಿರುದ್ಧ ದಾಳಿ ನಡೆಸಲು ಕರೆ ನೀಡಲಾಗಿದೆ. ರಾಜಕೀಯ ಲಾಭಕ್ಕಾಗಿ ಶಬರಿಮಲೆಯಲ್ಲಿ ಉದ್ದೇಶಪೂರ್ವಕವಾಗಿ ಘರ್ಷಣೆಯ ಪರಿಸ್ಥಿತಿಯನ್ನು ನಿರ್ಮಿಸಲಾಗಿದೆ ಎಂದು ಸುರೇಂದ್ರನ್ ಹೇಳಿದ್ದಾರೆ.