ಮಂಗಳೂರು,ಅ 24 (MSP): ನಗರದ ಹೊರವಲಯ ತಲಪಾಡಿ ಸಮೀಪ ಅ.24 ರ ಗುರುವಾರ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆ ಹಚ್ಚಿರುವ ಪೊಲೀಸರು ಮರಳು ಅಕ್ರಮ ದಾಸ್ತಾನು ಸೇರಿದಂತೆ, 15 ದೋಣಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ನೇತೃತ್ವದ ತಂಡ ಕಾರ್ಯಚರಣೆ ನಡೆಸಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.