ಉಡುಪಿ, ಆ.07 (DaijiworldNews/MS): ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ದ 65 ವರ್ಷ ಪ್ರಾಯದ ಅನಂತ ಸೇರೆಗಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ಬಂದಿದ್ದು ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ,ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.
ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು .ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ವೃತ್ತ ನಿರೀಕ್ಷಕರಾದ ಜಯಂತ್ ಎಮ್ ರವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಿರುತ್ತಾರೆ .ಮಹಿಳಾ ಠಾಣಾ ಸಿಬ್ಬಂದಿಗಳಾದ ಅಶೋಕ್ ಮತ್ತು ಜ್ಯೋತಿ ನಾಯಕ್ ಮತ್ತಿತರರು ಭಾಗವಹಿಸಿದ್ದರು