ಬ್ರಹ್ಮಾವರ, ಆ 08 (DaijiworldNews/PY): ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಆಗಸ್ಟ್ 8ರ ಭಾನುವಾರ ನಡೆದಿದೆ.
ಬೆಳಗ್ಗೆ 7.14ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕುಂದಾಪುರಕ್ಕೆ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದರು. ಶೂಟಿಂಗ್ ಹಿನ್ನೆಲೆ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಸಣ್ಣ-ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.