ಬಂಟ್ವಾಳ, ಆ 09 (DaijiworldNews/MS): ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಾಂತಿಗುಡ್ಡೆಯ ನಿವಾಸಿ ರವಿ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೊಲೆಯಾದ ಸುಂದರನು ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಆತನಿಗೆ ರವಿಯ ಪತ್ನಿ ಊಟ- ತಿಂಡಿ ನೀಡುತ್ತಿದ್ದರು. ಸುಂದರ ಹಾಗೂ ತನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಅಣ್ಣ- ತಮ್ಮನಿಗೆ ಪದೇ ಪದೇ ಜಗಳವಾಗುತ್ತಿತ್ತು. ಆದರೆ ಆ. 6 ರಂದು ರಾತ್ರಿ ನಡೆದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದರು.