ಸುಳ್ಯ, ಆ 10 (DaijiworldNews/MS): ಕೊರೊನಾ ಪಾಸಿಟಿವ್ ಬಂದಿರುವ ದಂಪತಿ ಗಳು ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ತೊರೆದು ಹೋಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಆಸುಪಾಸಿನಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ಧ ರಾಜೇಶ್ವರಿ ಹಾಗೂ ವಿನಯಕುಮಾರ್ ದಂಪತಿ ವೃದ್ದ ತಾಯಿಯ ಜತೆ ಗಾಂಧಿನಗರ ಸಂತೋಷ್ ಚಿತ್ರಮಂದಿರದ ಎದುರಿನ ಬಿಲ್ಡಿಂಗ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು
ರಾಜೇಶ್ವರಿ ಮತ್ತು ವಿನಯ ಕುಮಾರ್ ರಿಗೆ ಕಳೆದ ವಾರ ಕೊರೊನಾ ಪರೀಕ್ಷೆ ನಡೆಸಿದಾಗ ಅದರ ವರದಿ ಪಾಸಿಟಿವ್ ಬಂದಿತ್ತು. ಈ ವಿಷಯ ಅರಿತ ಆ ದಂಪತಿಗಳು ಶನಿವಾರ ತಾವಿದ್ದ ಕೊಠಡಿಗೆ ಹೊರಗಿನಿಂದ ಬೀಗ ಹಾಕಿ ತೆರಳಿದ್ದಾರೆ.
ವೃದ್ದೆ ಮನೆಯೊಳಗೆ ಬೊಬ್ಬಿಡುತ್ತಿರುವುದನ್ನು ಕಂಡ ಸ್ಥಳೀಯರು ಪೋಲಿಸರಿಗೆ ವಿಷಯ ತಿಳಿಸಿದರು. ಎಸ್. ಐ. ಹರೀಶ್ ರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯರಿದ್ದು ಬಾಗಿಲು ತೆರೆದು ವೃದ್ದೆಯನ್ನು ರಕ್ಷಿಸಿದರು.