ಮಂಗಳೂರು, ಆ. 12 (DaijiworldNews/SM): ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಶೇಕಡಾ 80ರಷ್ಟು ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾಯಿಸಿ ಚಿಕಿತ್ಸೆ ನೀಡಬೇಕೆಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಜಿಲ್ಲಾಧಿಕಾರಿ ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಸಭೆ ನಡೆದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಚಿವರು, 3293 ಪಾಸಿಟಿವ್ ಕೇಸ್ ದ.ಕ ಜಿಲ್ಲೆಯಲ್ಲಿದೆ. 2652 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ. 80 ಶೇಕಡ ಜನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾಯಿಸಬೇಕೆಂದು ಸಚಿವರು ತಿಳಿಸಿದ್ದಾರೆ.
ಇನ್ನು ಈ ನಡುವೆ ಕೋವಿಡ್ ಕೇರ್ ಸೆಂಟರ್ನಲ್ಲಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ. ಕೇಸ್ ಹೆಚ್ಚಿದ್ದಲ್ಲಿ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಿ ಎಂಬುವುದಾಗಿಯೂ ತಿಳಿಸಿದ್ದಾರೆ.