ಮಂಗಳೂರು,ಅ 26 (MSP): ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಚೈತ್ರಾ ಕುಂದಾಪುರ ಅವರ ನಡುವೆ ನಡೆದ ಮಾರಾಮಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಅವರ ಆರೋಗ್ಯ ಹದಗೆಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಹಾಗೂ ಆಕೆಯ ಆರು ಮಂದಿ ಸಹಚರರಿಗೆ ಸುಳ್ಯ ಜೆಎಂಎಫ್ ಸಿ ನ್ಯಾಯಾಲಯ ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ಹಿನ್ನಲೆಯಲ್ಲಿ ಮಂಗಳೂರಿನ ಸಬ್ ಜೈಲಿನಲ್ಲಿದ್ದ ಚೈತ್ರಾ ಕುಂದಾಪುರ ಅವರಿಗೆ ತೀವ್ರವಾದ ಜ್ವರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.