ಮಂಗಳೂರು, ಆ 14 (DaijiworldNews/PY): ನಗರದ ಬಲ್ಮಠದಲ್ಲಿರುವ ಮ್ಯಾಪಲ್ ಮೊಬೈಲ್ ಶೋರೂಂನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 41 ಲಕ್ಷ ರೂ. ಮೌಲ್ಯದ ಕಳವಾದ 40 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
"ಕೃತ್ಯದಲ್ಲಿ ಇಬ್ಬರು ಭಾಗಿಯಾಗಿರುವ ಪತ್ತೆಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯ ವಿರುದ್ದ ಮುಂಬೈನಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಕರಣ ಬೇಧಿಸಿದ ಪೊಲೀಸ್ ತಂಡಕ್ಕೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು 10,000 ರೂ. ನಗದು ಬಹುಮಾನ ಘೋಷಿಸಿದ್ದಾರೆ.
ಜುಲೈ 5ರಂದು ನಗರದ ಬಲ್ಮಠದಲ್ಲಿರು ಮ್ಯಾಪಲ್ ಮೊಬೈಲ್ ಶೋ ರೂಂನಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಸುಮಾರು 70 ಲಕ್ಷ ರೂ. ಮೌಲ್ಯದ ಐಫೋನ್ ಕಳವುಗೈದಿದ್ದರು.