ಮಂಗಳೂರು, ಆ 16 (DaijiworldNews/PY): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಇಂದಿನಿಂದ ಸಂಚಾರಕ್ಕೆ ಮುಕ್ತವಾಗಿದೆ.
ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, "ಜಿಲ್ಲಾಡಳಿತವು ಹಾಸನದ ಆಡಳಿತದೊಂದಿಗೆ ಸಂಪರ್ಕದಲ್ಲಿದೆ. ಶಿರಾಡಿ ಘಾಟಿಯಲ್ಲಿ 20 ಟನ್ ಭಾರದೊಳಗಿನ ವಾಹನಗಳಿಗೆ ಸಂಚಾರ ಮುಕ್ತವಾಗಿದೆ. ಸಂಚಾರದ ಬಗ್ಗೆ ಸೋಮವಾರ ಹಾಸನ ಜಿಲ್ಲಾಧಿಕಾರಿ ಅಧಿಕೃತವಾಗಿ ಸ್ಪಷ್ಟಪಡಿಸಲಿದ್ದಾರೆ" ಎಂದಿದ್ದಾರೆ.
ಆಗಸ್ಟ್ 13ರಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಶಿರಾಡಿ ಹಾಗೂ ಚಾರ್ಮಾಡಿ ಘಾಟಿ ರಸ್ತೆಗಳಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡದ ಕಾರಣ ಬೆಂಗಳೂರು ಹಾಗೂ ಮಂಗಳೂರು ಕಡೆಗೆ ಚಲಿಸುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತಾಗಿದೆ.