ಕಾರ್ಕಳ, ಆ 16 (DaijiworldNews/PY): ಮಾರ್ಕೆಟ್ ರಸ್ತೆಯಲ್ಲಿ ಕಳೆದ ಕೆಲ ವರ್ಷಗಳ ಹಿಂದೆ ಆರಂಭಗೊಂಡಿದ್ದ ಶಿವಂ ಎಲೆಕ್ಟ್ರಾನಿಕ್ಸ್ ಶೋ ರೂಂ ಆಂಡ್ ಸೇಲ್ಸ್ ಸರ್ವೀಸ್ ಬೆಂಕಿಗಾಹುತಿಯಾಗಿದ್ದು,ಲಕ್ಷಾಂತರ ಮೌಲ್ಯದ ಸೊತ್ತು ಹಾನಿಯಾಗಿದೆ.
ಸೋಮವಾರ ನಸುಕಿನ ಜಾವದಲ್ಲಿ ಈ ಘಟನೆ ಸಂಭವಿಸಿದೆ. ವ್ಯಾಪಾರ ಮಳಿಗೆಯಿಂದ ಭಾರೀ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರೊಬ್ಬರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾಯಿಸಿದರು. ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಅಗಮಿಸುತ್ತಿದ್ದಂತೆ ಬೆಲೆಬಾಳುವ ಎಲೆಕ್ಟ್ರಾನಿಕ್ಸ್ ಪರಿಕರಗಳು ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.