ಪುತ್ತೂರು, ಆ. 17 (DaijiworldNews/SM): ತಾಲೂಕಿನ ಕಬಕ ಗ್ರಾಮ ಪಂಚಾಯತ್ ನ ಸ್ವಾತಂತ್ರ್ಯ ರಥಕ್ಕೆ ಅಡ್ಡಿಯುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮೂವರಿಗೆ ಜಾಮೀನು ಮಂಜೂರಾಗಿದೆ.
ಪುತ್ತೂರು ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಝೀಜ್, ಸಮೀರ್, ಅಬ್ದುಲ್ ರಹಿಮಾನ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮೂವರಿಗೂ ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ಆರೋಪಿಗಳು ಬಂಧನಕ್ಕೊಳಗಾಗಿ ಎರಡೇ ದಿನದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.