ಬಂಟ್ವಾಳ, ಆ. 18 (DaijiworldNews/SM): ತಾಲಿಬಾನ್ ವಶವಾಗಿರುವ ಅಫ್ಘಾನಿಸ್ತಾನದಲ್ಲಿ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಸಮೀಪದ ಕಲ್ಕುರಿ ನಿವಾಸಿ ಧರ್ಮಗುರು ಫಾ. ಜೆರೋಮ್ ಸಿಕ್ವೆರಾ ಅವರು ಅಫ್ಘಾನಿಸ್ಥಾನದ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ.
ಸಾಂದರ್ಭಿಕ ಚಿತ್ರ
ಸದ್ಯ ಅವರು ಮನೆಯವರೊಂದಿಗೆ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿದ್ದಾರೆಂದು ಮನೆ ಮಂದಿ ತಿಳಿಸಿದ್ದಾರೆ. ಫಾ.ಜೆರೋಮ್ ಅವರು ಅಫ್ಘಾನಿಸ್ಥಾನದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 5 ವರ್ಷಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿದ್ದ ಅವರು ಬಳಿಕ ಜೆಮ್ಷೆಡ್ಪುರದಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್ನಲ್ಲಿ ಮರಳಿ ಅಫ್ಘಾನಿಸ್ಥಾನಕ್ಕೆ ತೆರಳಿದ್ದರು.
ತಾಲಿಬಾನ್ ಉಗ್ರರ ಸಂಘರ್ಷ ಆರಂಭವಾಗುತ್ತಿದ್ದಂತೆ ಊರಿಗೆ ಮರಳಲು ಸಿದ್ಧತೆ ನಡೆಸಿದ್ದ ಫಾದರ್ ಅವರು ಅವರ ಜತೆಗಾರ ಮತ್ತೋರ್ವ ಧರ್ಮಗುರು ಅವರಿಗಾಗಿ ವಿಮಾನ ನಿಲ್ದಾಣದಲ್ಲಿ ಉಳಿದಿದ್ದರು ಎಂದು ಮನೆ ಮಂದಿ ತಿಳಿಸಿದ್ದಾರೆ.