ಮಂಗಳೂರು, 21 (DaijiworldNews/HR): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ 5,58,900 ಲಕ್ಷ ರೂ. ಮೌಲ್ಯ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಡೆದಿದೆ.
ದುಬೈನಿಂದ ಮಂಗಳೂರಿಗೆ ಆಗಮಿಸಿದ ಮುರುಡೇಶ್ವರ ನಿವಾಸಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿದಾಗ ಆರೋಪಿಯು ದುಬೈನಿಂದ ಮಹಿಳೆಯರ ಹೇರ್ ಬ್ಯಾಂಡ್ ಇನ್ನಿತರ ವಸ್ತುಗಳ ಮೂಲಕ ಚಿನ್ನ ಸಾಗಟ ಮಾಡುತ್ತಿರುವುದು ಪತ್ತೆಯಾಗಿದೆ.
ಇನ್ನು ಒಟ್ಟು 115 ಗ್ರಾಂ ನ 5,58,900 ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಇನ್ನೂ ಇತ್ತೀಚಿಗೆ ಕಾಸರಗೋಡು ಮೂಲದ ವ್ಯಕ್ತಿದಿಂದ ಸರಿಸುಮಾರು 350.330ಗ್ರಾಂ ಅಕ್ರಮ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಆರೋಪಿ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.