ವಿಟ್ಲ, ಆ. 22 (DaijiworldNews/HR): ವಿಟ್ಲದಲ್ಲಿರುವ ವಿ.ಹೆಚ್ ಕಾಂಪ್ಲೆಕ್ಸ್ನಲ್ಲಿರುವ ಕಚೇರಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲ ಉಮ್ಮರ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಸಾಂಧರ್ಭಿಕ ಚಿತ್ರ
ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಸಂತ್ರಸ್ತೆಯಿಂದ ದೂರು ನೀಡಿದ್ದು, ನಾನು ಕಳೆದ 9 ವರ್ಷಗಳಿಂದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಆಗಸ್ಟ್ 17ರಂದು ಸಂಜೆ ವೇಳೆ ಕಚೇರಿಯಲ್ಲಿ ಯಾರೂ ಇಲ್ಲದಿದ್ದಾಗ ಕಿರುಕುಳ ನೀಡಿ ಈ ಬಗ್ಗೆ ಯಾರ ಬಳಿಯೂ ಹೇಳದಂತೆ ಹೆದರಿಸಿರುವುದಾಗಿ ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.