ಉಪ್ಪಿನಂಗಡಿ, ಆ.23 (DaijiworldNews/HR): ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಿದ್ದು ಅದಕ್ಕೆ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ.
ಕೋಮು ಗಲಭೆಗೆ ಕುಮ್ಮಕ್ಕು ನೀಡುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು, ಪುತ್ತೂರು ತಾಲೂಕು ಶಾಸಕ ಸಂಜೀವ ಮಠಂದೂರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ.