ಕುಂದಾಪುರ, ಆ 24 (DaijiworldNews/MS): ಬೈಕ್ ಢಿಕ್ಕಿಯಾದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ, ಆ.23 ರ ಸೋಮವಾರ ರಾತ್ರಿ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ಪಾದಚಾರಿಯನ್ನು ಭಟ್ಕಳ ಜಾಲಿ ನಿವಾಸಿ ಮಂಜು (46) ಎಂದು ಗುರುತಿಸಲಾಗಿದೆ. ಬೈಂದೂರು ರಾಹುತನಕಟ್ಟೆಯಲ್ಲಿ ಬಳಿ ಘಟನೆ ನಡೆದಿದ್ದು, ಮೀನು ಖರೀದಿಸಲು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲೆ ಸಾವನ್ನಪ್ಪಿದರೆ , ಬೈಕ್ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.