ಕಾಸರಗೋಡು, ಆ 25 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 619 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 422 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 1,25,629 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 4,507 ಮಂದಿ ಚಿಕಿತ್ಸೆಯಲ್ಲಿದ್ದು, 18,775 ಮಂದಿ ನಿಗಾದಲ್ಲಿದ್ದಾರೆ.
ಕೊರೊನಾ ಸೋಂಕಿಗೆ ಈವರೆಗೆ 432 ಮಂದಿ ಮೃತಪಟ್ಟಿದ್ದಾರೆ.