ಮಂಗಳೂರು, ಆ. 27 (DaijiworldNews/SM): 2021ನೇ ಸಾಲಿನ ವೃತ್ತಿ ಶಿಕ್ಷಣದ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಆಗಸ್ಟ್ 28 ಮತ್ತು 29 ರಂದು ನಡೆಯಲಿದೆ.
ಆಗಸ್ಟ್ 28ರ ಶನಿವಾರ ಜಿಲ್ಲೆಯ 19 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.30ರ ವರೆಗೆ ನಡೆಯಲಿದೆ. ಅಲ್ಲದೆ, ಆಗಸ್ಟ್ 30 ರ ರವಿವಾರ ಮಂಗಳೂರಿನ 2 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆಯು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯಲಿದೆ.
ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರದಂದು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಕೂಡಾ ಅಭ್ಯರ್ಥಿಗಳಿಗೆ ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
ವಾರಾಂತ್ಯ ಕರ್ಪೂ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ತಮ್ಮ ಸಂಸ್ಥೆಯ ವತಿಯಿಂದ ಎಲ್ಲಾ ರೂಟ್ಗಳಲ್ಲಿಯೂ ಅಗತ್ಯ ಬಸ್ಗಳು ಸಂಚರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.