ವಿಟ್ಲ, ಆ. 27 (DaijiworldNews/SM): ಪುಣಚ ಗ್ರಾಮದ ಮಣಿಲ ಎಂಬಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಮೃತಪಟ್ಟಿದ್ದಾರೆ.
ಆಟೋ ಚಾಲಕ, ಪರಿಯಾಲ್ತಡ್ಕ ನಿವಾಸಿ ಅಶ್ರಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಟೋ ಚಾಲಕ ಅಶ್ರಫ್ ಅವರ ಸ್ಥಿತಿ ಗಂಭೀರವಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.