ಉಡುಪಿ, ಅ11: ಇಲ್ಲಿನ ಪಂಚರತ್ನ ಪಾರಡೈಸ್ ಗೆ ಹೊಟೇಲ್ ಗೆ ನುಗ್ಗಿದ ದುಷ್ಕರ್ಮಿಗಳು ಧಾಂದಲೆ ನಡೆಸಿ, ಹೋಟೆಲ್ ಮಾಲೀಕ ಸಂತೋಷ್ ಶೆಟ್ಟಿ ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಏಕಾಏಕಿ ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಗಳು ಸಂತೋಷ್ ಶೆಟ್ಟಿಯವರ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ರು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ್ವಯ ಆರೋಪಿ ಕಿರಣ್ ಮತ್ತು ಅನ್ವರ್ ನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಇನ್ನು ಗಾಯಗೊಂಡ ಉದ್ಯಮಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.