ಬೆಳ್ತಂಗಡಿ, 29 (DaijiworldNews/HR): ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಲಾಯಿಲ ನಿವಾಸಿ ಸಂತೋಷ್ ಕುಮಾರ್ (45ವ) ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಸಂತೋಷ್ ಕುಮಾರ್ ಅವರಿಗೆ ಕೆಲವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು, ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿ ಸ್ವಾವಲಂಬಿಯಾಗಿ ದುಡಿಯುತ್ತಿದ್ದರು ಎನ್ನಲಾಗಿದೆ.
ಇನ್ನು ಆರಂಭದಲ್ಲಿ ಸಂತೋಷ್ ಕುಮಾರ್ ಅವರು ಉಜಿರೆ ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಯಾಗಿ, ಲಾಯಿಲ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ದೀರ್ಘಕಾಲಿಕ ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.