ಕಾರ್ಕಳ, ಆ. 29 (DaijiworldNews/SM): ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮಹತ್ತರ ಜವಾಬ್ದಾರಿ ನನ್ನ ಮೇಲಿದೆ. ಸಚಿವನಾಗಿ ಇಡೀ ರಾಜ್ಯದ ಅಭಿವೃದ್ದಿ ಕೆಲಸಗಳ ಜೊತೆ ಕ್ಷೇತ್ರದ ಪ್ರತೀ ಪಂಚಾಯತಿಗಳ ಅಭಿವೃದ್ದಿ ಕಾರ್ಯಗಳು ನಡೆಯಬೇಕಾಗಿದ್ದು ನನ್ನ ಶಕ್ತಿ ಮೀರಿ ಪ್ರಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಬೆಳ್ಮಣ್ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ಸಚಿವರ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಳ್ಮಣ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಲವಾರು ಗ್ರಾಮೀಣ ಭಾಗ ರಸ್ತೆಗಳ ಸಹಿತ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ಮಣ್ ಗ್ರಾಮ ಪಂಚಾಯತಿ ಅಧ್ಯಕ್ಷ ಜನಾರ್ದನ ತಂತ್ರಿ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತಿ ಸದಸ್ಯೆ ಆಶ ದೇವೇಂದ್ರ ಶೆಟ್ಟಿ, ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್, ತಾ. ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ , ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ, ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ, ಮತ್ತಿತರಿದ್ದರು.