ಮಂಗಳೂರು, ಆ. 30 (DaijiworldNews/HR): ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಮಂಗಳೂರಿನ ಕೊಣಾಜೆ ವಿವಿ ಆವರಣಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ.
ಕೊಣಾಜೆ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭಕ್ಕೆ ಸಚಿವ ಡಾ.ಅಶ್ವಥ್ ನಾರಾಯಣ್ ಆಗಮಿಸಿದ್ದು, ಈ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಪೊಲೀಸರು ವಿವಿ ಕ್ಯಾಂಪಸ್ ಆವರಣದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸ್ ವ್ಯಾನ್ಗೆ ತುಂಬಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.