ಮಂಗಳೂರು, ಆ 31 (DaijiworldNews/PY): ಪೋಸ್ಕೊ ಪ್ರಕರಣದ ಆರೋಪಿಯೋರ್ವ ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಮೃತ ಆರೋಪಿಯನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ.
ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.