ಸುಳ್ಯ, ಅ 31(SM): ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಿಂದೂ ಕಾರ್ಯಕರ್ತರ ನಡುವಿನ ಮಾರಾಮಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಪ್ರಸಾದ್ ಪಂಜರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ, ಚೈತ್ರಾ ಕುಂದಾಪುರ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಗುರುಪ್ರಸಾದ್ ಪಂಜ ಅವರ ತಲೆಗೆ ಗಾಯಗಳಾಗಿದ್ದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಚೈತ್ರಾ ಕುಂದಾಪುರ ಗುರುಪ್ರಸಾದ್ ವಿರುದ್ಧ ಮಾನಭಂಗ ಪ್ರಕರಣ ದಾಖಲಿಸಿದ್ದರು.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಪ್ರಸಾದ್ ರನ್ನು ಸುಬ್ರಹ್ಮಣ್ಯ ಪೊಲೀಸರು ಇಂದು ವಶಕ್ಕೆ ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನವೆಂಬರ್ 13ರವರೆಗೆ ಗುರುಪ್ರಸಾದ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.