ಕಾಸರಗೋಡು, ಆ 31 (DaijiworldNews/PY): ಜಿಲ್ಲೆಯಲ್ಲಿ ಮಂಗಳವಾರ 468 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 1,24,177 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 423 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 1,18,297 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 4,870 ಮಂದಿ ಚಿಕಿತ್ಸೆಯಲ್ಲಿದ್ದು, 18,659 ಮಂದಿ ನಿಗಾದಲ್ಲಿದ್ದಾರೆ.