ಕಾರ್ಕಳ, ಸೆ. 01 (DaijiworldNews/PY): "ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಆರೋಗ್ಯದ ಕಾಳಜಿ ವಹಿಸಿಕೊಳ್ಳಬೇಕು" ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.
ಕಾರ್ಕಳ ನಗರದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಸೆ.1ರಂದು ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ವಿಜಯರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಇಲಾಖಾ ವತಿಯ ಉಚಿತ ಪಠ್ಯಪುಸ್ತಕ ಮತ್ತು ದಾನಿಗಳು ನೀಡಿರುವ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಎಸ್.ಡಿ.ಎಂ.ಸಿ ಸದಸ್ಯ ಜಗದೀಶ್ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕಿ ಹರ್ಷಿಣಿ ಕೆ. ಉಪಸ್ಥಿತರಿದ್ದರು.
ಶಂಕರಿ ಭಟ್ ನಿರ್ವಹಿಸಿದರು. ವೀಣಾ ಧನ್ಯವಾದವಿತ್ತರು.