ಕುಂದಾಪುರ, ನ 01 (MSP): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಉಡುಪಿ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಆರೋಪಿ ಹೆಜಮಾಡಿಯ ಗ್ರಾಮ ಲೆಕ್ಕಾಧಿಕಾರಿ ಕುಮಾರಸ್ವಾಮಿ (42) ಎಂಬಾತನೇ ಆರೋಪಿಯಾಗಿದ್ದು, ಜಮೀನು ಸಂಬಂಧ ಕಚೇರಿಗೆ ಕೆಲಸ ಮಾಡಿಸಿಕೊಳ್ಳಲು ಬಂದಿದ್ದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು.
ಆರೋಪಿ ಕುಮಾರಸ್ವಾಮಿ ಕಚೇರಿಯಲ್ಲಿದ್ದ ವೇಳೆ ತನ್ನ ಸಂಬಂಧಿಕರೊಂದಿಗೆ ಬಾಲಕಿ ಜಮೀನಿಗೆ ಸಂಬಂಧಿಸಿದ ಕೆಲಸ ಮಾಡಿಸಿಕೊಳ್ಳಲು ಹೋದ ಸಂದರ್ಭ ಮೊಬೈಲ್ ನಂಬರ್ ಪಡೆದಿದ್ದ. ನಂತರ ನಿರಂತರವಾಗಿ ಫೋನ್ ಮಾಡಿ ಮಾತನಾಡುತ್ತಿದ್ದು, ಮದುವೆಯ ಬಗ್ಗೆಯೂ ಮಾತನಾಡಿದ್ದು, ಮದುವೆಯಾಗುವಂತೆ ಪೀಡಿಸುತ್ತಿದ್ದ. ಹೋಟೆಲ್ಗೆ ಕರೆದುಕೊಂಡು ಹೋಗಿ ಉಪಾಹಾರ ಕೊಡಿಸಿ ಬೆತ್ತಲೆ ಫೋಟೋ ಕಳುಹಿಸುವಂತೆ ಪೀಡಿಸುತ್ತಿದ್ದ ಎಂಬುದಾಗಿ ಯುವತಿ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಆರೋಪಿಗೆ ಈಗ ಜಾಮೀನು ದೊರಕಿದ್ದು, ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಶರ್ತಬದ್ಧ ಜಾಮೀನು ದೊರಕಿದೆ.