ಬಂಟ್ವಾಳ, ಸೆ 3 (DaijiworldNews/MS): ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ದಲ್ಲಿ ಸ್ಕೂಟರ್ ಸವಾರ ಮೃತ ಪಟ್ಟ ಘಟನೆ ನಾವೂರದಲ್ಲಿ ನಡೆದಿದೆ.
ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ.ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಸ್ವರೂಪದ ಗಾಯವುಂಟಾಗಿತ್ತು. ಕೂಡಲೇ ಗಾಯಗೊಂಡ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತರಾದರೂ ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.